No menu items!
15.1 C
Munich
Saturday, June 13, 2026

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

Must read

ಬೆಂಗಳೂರು: ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ರಸ್ತೆ ಬದಿಗೆ ಕಾರು ನಿಲ್ಲಿಸಿ ಡೋರ್ ತೆಗೆಯುತ್ತಿದ್ದಂತೆ ಕಾರನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತ ಡೋರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಆದರೆ, ಕೆಳಗೆ ಬಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೆ ಬರುತ್ತಿದ್ದ ಖಾಸಗಿ ಬಸ್ ಕೂಡ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಕೆ.ಆರ್. ಪುರದ ಬೈಕ್‌ ಸವಾರ ಬಿಜೆಪಿ ಕಾರ್ಯಕರ್ತ ಪ್ರಕಾಶ್ (35) ಎಂದು ಗುರುತಿಸಲಾಗುದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾರು ಚಾಲಕ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಬಂದು ಪಕ್ಕದಲ್ಲಿನ ಡೋರ್ ತೆಗೆದಿದ್ದಾನೆ. ಆಗ, ಡೋರ್ ಓಪನ್‌ ಆಗುತ್ತಿದ್ದಂತೆ ಕಾರಿನ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ಪ್ರಕಾಶ್‌ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ.

- Advertisement -spot_img

More articles

- Advertisement -spot_img

Latest article