ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ”ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ಬಿಜೆಪಿಯ ಗೆಲುವು ಖಚಿತ. ಶ್ರೀರಾಮುಲು ದಾಖಲೆಯ ಅಂತರದ ಜಯ ಸಾಧಿಸಲಿದ್ದಾರೆ.
ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಜ್ಯದ 30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ”ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ. ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಸಮಯ ಇದೆ, ನೋಡೋಣ ಎಂದು ಹೇಳಿದರು.
30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ !
Date: