ಐಟಿ ಅಧಿಕಾರಿಗಳ ಕಾರ್ಯಾಚರಣೆ: ಬರೋಬ್ಬರಿ 18 ಕೋಟಿ ರೂ. ನಗದು ಪತ್ತೆ

Date:

ಧಾರವಾಡ: ಧಾರವಾಡ ನಗರದಲ್ಲಿ ಐಟಿ ದಾಳಿ ನಡೆದಿದ್ದು, ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ಣ ರೇಸಿಡೆನ್ಸಿ 18 ಕೋಟಿ ಹಣ ಜಪ್ತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿ ಬಸವರಾಜ್ ದುತ್ತಣ್ಣವರ ಎಂಬವರ ಮನೆ ಇದೆ. ಚುನಾವಣೆ ಹಿನ್ನೆಲೆ ಮನೆಯಲ್ಲಿ ಮದ್ಯ ಸಂಗ್ರಹಿಸಿ ಇಟ್ಟ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿ ಮದ್ಯ ಹುಡುಕುತ್ತಿದ್ದಾಗ ಅಲ್ಮೆರಾದಲ್ಲಿ ಹಣ ಪತ್ತೆಯಾಗಿದೆ. ಇದಕ್ಕೂ ಮೊದಲು ಮನೆಯಲ್ಲಿದ್ದ ವಿವಿಧ ಚೀಲಗಳಲ್ಲಿ ಮದ್ಯ ಹುಡುಕಿದ ಅಧಿಕಾರಿಗಳಿಗೆ ಮದ್ಯದ ಬಾಟ್ಲಿಗಳು ಸಿಗದೇ ಹೋದಾಗ ಅಲ್ಮೆರಾದಲ್ಲೂ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬೃಹತ್ ಮೊತ್ತ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಎಸಿಪಿ ಬಸವರಾಜ ಹಾಗೂ ಇತರ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...