RD ಪಾಟೀಲ್ ಮನೆಗೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ

Date:

ಕಲಬುರ್ಗಿ : ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿರುವುದು ಕಲಬುರ್ಗಿಯಲ್ಲಿ ಆಕ್ರೋಶದ ಕಟ್ಟೆಯನ್ನೇ ಒಡೆಸಿದೆ.

58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.

ಇತ್ತೀಚಿಗೆ ನಡೆದಿದ್ದ PSI ಮರುಪರೀಕ್ಷೆ ವೇಳೆ ಕೂಡ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು ಜೈಲುಗಂಬಿ ಎಣಿಸುತ್ತಿರುವ RD ಪಾಟೀಲ್ ಮನೆಗೆ ಉಮೇಶ್ ಜಾಧವ್ ಭೇಟಿಯಾರುವುದನ್ನು ಸಮರ್ಥಸಿಕೊಳ್ಳುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೂ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ ಭೇಟಿ ಮೂಲಕ ಜನರಿಗೆ ಯಾವ ರೀತಿಯ ಸಂದೇಶ ನೀಡಲು ಬಿಜೆಪಿ ಸಂಸದ ಮುಂದಾಗಿದ್ದಾರೆ? ಎಂಬ ಪ್ರಶ್ನೆಗೆ ಜಿಲ್ಲೆಯ ಯಾವುದೇ ಬಿಜೆಪಿ ನಾಯಕರ ಬಳಿಯೂ ಉತ್ತರವಿಲ್ಲದಾಗಿದೆ.

ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಬಿಜೆಪಿ ಕುರಿತು ಈಗಾಗಲೇ ಮೂಡಿದ್ದ ತಿರಸ್ಕಾರ ಮನೋಭಾವವನ್ನು ದುಪ್ಪಟ್ಟು ಮಾಡಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...