No menu items!
20.5 C
Munich
Wednesday, July 8, 2026

ಬೆಂಗಳೂರಿನ ಕದಂಬ ಹೋಟೆಲ್‌ʼಗೆ ಬೆದರಿಕೆ ಪತ್ರ !

Must read

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೇಲ್‌ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೌದು ಹೆಚ್ಎಮ್‌ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಸ್ಟೇಷನ್ ಗೆ ಅನಾಮದೇಯ ಪತ್ರ ಕೊಡಲಾಗಿದೆ. ಹೊಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಸ್ಟೇಷನ್ ಗೆ ಪತ್ರ ಬರೆಯಲಾಗಿದೆ.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳವನ್ನು ಕರೆಸಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಪೊಲೀಸ್ ಠಾಣೆಗೆ ನೀಡಲಾದ ಪತ್ರದಲ್ಲಿ ಪೊಲೀಸರಿಗೆ ಬೈದು ಪತ್ರ ಬೈಯಲಾಗಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಪೊಲೀಸರಿಗೆ ಪತ್ರ ಬರೆದಿದ್ದಾನೆ. ಮುಂದುವರೆದು ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಕದಂಬ ಹೊಟೇಲ್ ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ.

- Advertisement -spot_img

More articles

- Advertisement -spot_img

Latest article