ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜಿನಾಮೆ

By
0 Min Read

ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಸದಸ್ಯರಾಗಿದ್ದ ಕೆ.ಪಿ.ನಂಜುಂಡಿ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ ಮಾಡಿದ್ದು, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ನಂಜುಂಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ವಿಶ್ವಕರ್ಮ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ.

Share This Article