Home ಎಲ್ಲೆಲ್ಲಿ ಏನೇನು.? ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

0
ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಉಡುಪಿ: ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ ಹೊಂದಿದ್ದು, ಇಂದು ಸಂಜೆ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗನೂರಿನ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಲಿದೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷ ಸೇವೆ ಸಲ್ಲಿಸಿರುವ ಸುಬ್ರಹ್ಮಣ್ಯ ಧಾರೇಶ್ವರ, ಕೋಟ ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳ, ಪೆರ್ಡೂರು ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ್ದರು. ಮೇಳದ ಎಲೆಕ್ಟ್ರೀಷಿಯನ್ ಆಗಿ ಸೇರಿ ಬಳಿಕ ಭಾಗವತರಾದರು. ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಮಗನ ಮನೆಯಲ್ಲಿ ನಿಧನ ಹೊಂದಿದ್ದಾರೆ.