No menu items!
30.9 C
Munich
Thursday, June 18, 2026

ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು: ಸಿಎಂ ಸಿದ್ದರಾಮಯ್ಯ

Must read

ಬೀದರ್: ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಪ್ರಕರಣವನ್ನು ಈಗಾಗಲೇ ಸಿಐಡಿಗೆ ಕೊಟ್ಟಿದ್ದೇವೆ. ಇದಕ್ಕಾಗಿ ವಿಶೇಷ ನ್ಯಾಯಾಲಯ ಮಾಡಬೇಕು. ಕೊಲೆ ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸಬೇಕು. ನಾನು ಈಗಾಗಲೇ ಪಬ್ಲಿಕ್ ಪ್ಯಾಸಿಕ್ಯೂಟರ್ ಜೊತೆ ಮಾತನಾಡಿದ್ದೇನೆ.
ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ನೇಹಾ ಹತ್ಯೆ ಸಿಬಿಐಗೆ ಕೊಡುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಯಾವುದಾದರೂ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದಾರಾ..? ಅಧಿಕಾರದಲ್ಲಿ ಇದ್ದಾಗ ಒಂದು ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ..? ನಾನು ಅಧಿಕಾರದಲ್ಲಿರುವಾಗ ಅನೇಕ ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಇದನ್ನ ಬಿಜೆಪಿ ರಾಕೀಯವಾಗಿ ಬಳಸುವುದು ಸರಿಯಲ್ಲಾ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದರು.

- Advertisement -spot_img

More articles

- Advertisement -spot_img

Latest article