ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ನಗರದ ಸದಾಶಿವನಗರಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿದ್ದಾರೆ. ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ರಣದೀಪ್ ಸಿಂಗ್ ಅವರನ್ನ ಶಾಸಕ ಲಕ್ಷ್ಮಣ್ ಸವದಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾಗತಿಸಿದರು. ಎಂಎಲ್ ಸಿ ಚನ್ನರಾಜು ಹಟ್ಟಿಹೋಳಿ ಸಾಥ್ ನೀಡಿದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಗೆಲುವಿನಭಾಗವಾಗಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಸದ್ಯದ ಬೆಳಗಾವಿ ಸ್ಥಿತಿಗತಿ ಹಾಗೂ ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಕೌಂಟರ್ ಕೊಡಲು ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ
