No menu items!
17.9 C
Munich
Saturday, August 1, 2026

ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ರಚನೆ: ಸಚಿವ ಪರಮೇಶ್ವರ್‌

Must read

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು. ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article