ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಬಂಧ ಇಲ್ಲ !

Date:

ಯಾದಗಿರಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಸಂಬಂಧ ಇಲ್ಲ ಎಂದರು.
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ....

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಅಯೋಧ್ಯೆ: ಅಯೋಧ್ಯೆಯ ಭವ್ಯ...

ಚಳಿಗಾಲದಲ್ಲಿ ದೊಡ್ಡಪತ್ರೆ ಎಲೆಗಳ ಸೇವನೆಯಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ..?

ಚಳಿಗಾಲದಲ್ಲಿ ದೊಡ್ಡಪತ್ರೆ ಎಲೆಗಳ ಸೇವನೆಯಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ..? ಪ್ರಕೃತಿಯಲ್ಲಿ ನಮ್ಮ ಆರೋಗ್ಯಕ್ಕೆ...

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 10 ಕಡೆ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 10 ಕಡೆ ಲೋಕಾಯುಕ್ತ ದಾಳಿ ಬೆಂಗಳೂರು: ರಾಜ್ಯದಲ್ಲಿ...