ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಭಂದಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ, ವಿಚಾರಣೆಗೆ 7 ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಎಸ್ ಐ ಟಿ ಗೆ ಪ್ರಜ್ವಲ್ ರೇವಣ್ಣ ವಕೀಲ ಅರುಣ್ ಪತ್ರ ಬರೆದಿದ್ದಾರೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಅವರು ಎಲ್ಲಿಯೂ ಕಂಡಿಲ್ಲ.
ವಿಶೇಷ ತನಿಖಾ ತಂಡದ ಪೊಲೀಸರು ನೋಟಿಸ್ ಜಾರಿ ಮಾಡಿದ ಮೇಲೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಒತ್ತಡ ಹೆಚ್ಚಾಗಿದೆ. ಅಶ್ಲೀಲ ವಿಡಿಯೋ ಹಾಗೂ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿಚಾರಣೆ SIT ತಂಡ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ !
Date: