ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್‌ ಔಟ್ ನೋಟಿಸ್‌ ಜಾರಿ

Date:

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡದ ವಿಡಿಯೋ ದೌರ್ಜನ್ಯ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ ವಿಭಾಗಕ್ಕೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.
ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಇತ್ತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...