No menu items!
13.9 C
Munich
Wednesday, April 29, 2026

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕನಿಗೆ ಐಟಿ ಶಾಕ್: 15 ಅಧಿಕಾರಿಗಳಿಂದ ದಾಳಿ

Must read

ಬೆಂಗಳೂರು: ಸಚಿವ ಜಮೀರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ.
3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article