No menu items!
18.6 C
Munich
Wednesday, April 29, 2026

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ನವೀನ್‌ ಗೌಡಗೆ ನೋಟಿಸ್

Must read

ಹಾಸನ: ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ ಎಸ್‍ಐಟಿ ವಿಚಾರಣೆಗೆ ಕರೆದಿದೆ.
ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ. ಈಗಾಗಲೇ ನವೀನ್ ಗೌಡ ಫೋನ್‍ನಲ್ಲಿ ಪ್ರಾಥಮಿಕ ಮಾಹಿತಿ ನೀಡಿದ್ದು, ಈ ವೇಳೆ ನಾನು ಪೆನ್‍ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾನೆ.
ಈ ನಡುವೆ ಇಂದು ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಜಗತ್ತಿನ ಎಲ್ಲಾ ವಿಮಾನ ನಿಲ್ದಾಣಗಳಿಗೂ ನೋಟಿಸ್ ರವಾನಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article