No menu items!
26.3 C
Munich
Thursday, June 18, 2026

ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು – ಸುರ್ಜೇವಾಲಾ

Must read

ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾಹಿತಿ ನೀಡಿದರು.
ನಗರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮೂರು ಸಾವಿರದಷ್ಟು ವಿಡಿಯೋಗಳನ್ನು ಮಾಡಲಾಗಿದೆ. ಅಲ್ಲದೇ, ಅವರದ್ದೆ ಕುಟುಂಬದಿಂದಲೇ ಓರ್ವ ಮಹಿಳೆಯನ್ನುಅಪಹರಣ ಮಾಡಲಾಗಿದೆ.
ಇವರ ವಿರುದ್ಧ ಸೂಕ್ತ ಕ್ರಮವಾಗಬೇಕು. ಅಲ್ಲದೇ, ಕಳೆದ 75 ವರ್ಷಗಳಲ್ಲಿ ದೇಶದ ಇತಿಹಾಸದಲ್ಲಿ ಇಂತಹದ್ದೊಂದು ಪ್ರಕರಣ ನಡೆದಿರಲಿಲ್ಲ. ಈ ಪ್ರಕರಣದ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article