ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ: ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ

Date:

ಬೆಂಗಳೂರು: ಜೆಪಿ ಭವನದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ ಇದೆ. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಅಮಾನತು ಮಾಡಲಾಗಿದೆ. ಅಮಾನತು ಬದಲಾಗಿ ಪಕ್ಷಕ್ಕೆ ಆಗಿರುವ ಮುಜುಗರದಿಂದ ತಪ್ಪಿಸಿಕೊಳ್ಳಲು ಉಚ್ಚಾಟನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಜ್ವಲ್ ವಿರುದ್ಧ ಕಠಿಣ ಶಿಕ್ಷೆ ಬಗ್ಗೆ ಪ್ರಸ್ತಾಪ ಬೆನ್ನಲ್ಲೇ ಪ್ರಜ್ವಲ್ ಉಚ್ಚಾಟನೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಉಚ್ಚಾಟನೆ ಮಾಡುವುದು ಪಕ್ಕಾ. ಆದರೆ ಫಲಿತಾಂಶ ಮುಂಚೆಯೋ ಅಥವಾ ನಂತರವೋ ಎನ್ನುವುದು ಕುತೂಹಲ ಮೂಡಿಸಿದೆ. ಯಾವಾಗ ಉಚ್ಚಾಟನೆ ಮಾಡಬೇಕು ಎಂಬುದರ ಕುರಿತು ಇವತ್ತಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದರ ಜೊತೆ ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ವಿರುದ್ಧ ಹೋರಾಟಕ್ಕೂ ಇಂದಿನ ಕೋರ್ ಕಮಿಟಿಯಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಬಾಲಿವುಡ್‌ ನ ಎವರ್‌ ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ

ಬಾಲಿವುಡ್‌ ನ ಎವರ್‌ ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ ಬಾಲಿವುಡ್‌ನ ಹಿರಿಯ...

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ ಮದ್ದೂರು:...

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ:...

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು!

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು! ಕೋಲಾರ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್...