ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

Date:

ಬೆಂಗಳೂರು: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು,
ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ”ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...