ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ,
ತನಿಖೆ ಪಾರದರ್ಶನಕವಾಗಿ ನಡೆಯಬೇಕಿದ್ರೆ ಸಿಬಿಐಗೆ ಕೊಡಬೇಕು ಎಂದು ಹೇಳಿದರು.
ಬಹುತೇಕ ಜನರ ಅಭಿಪ್ರಾಯ ಇದೆ ಆಗಿದೆ. ಸಿಎಂ ಅಭಿಪ್ರಾಯ ಅವರದ್ದು.
ಸಿಬಿಐ ಗೆ ತನಿಖೆ ವಹಿಸುವುದೇ ಸೂಕ್ತ ಎಂದರು. ಮಾಜಿ ಸಚಿವ ಈಶ್ವರಪ್ಪ ಪ್ರಶ್ನೆಗೆ ಉತ್ತರಿಸಲು ಯಡಿಯೂರಪ್ಪ ನಿರಾಕರಿಸಿದರು.
ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ ಎಂದು ಹೇಳಿದರು. ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್ ಗಳಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಸಿಬಿಐ ತನಿಖೆ ಸೂಕ್ತ: ಬಿ.ಎಸ್. ಯಡಿಯೂರಪ್ಪ
Date:






