ಲಕ್ನೋ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ನದಿಗೆ ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ.!
Date:






