ಬೆಂಗಳೂರಿಗೆ ಬರಬೇಕಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡ ಪ್ರಜ್ವಲ್ ರೇವಣ್ಣ !

Date:

ಬೆಂಗಳೂರು: ಪ್ರಜ್ವಲ್ ರೇವಣ್ಣ ಜರ್ಮನ್ನ ಮ್ಯೂನಿಚ್ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ ರದ್ದುಗೊಳಿಸಲಾಗಿದೆ. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ನಾಲ್ಕು ದಿನಗಳ ಹಿಂದೆಯೇ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.
ಈ ಮಧ್ಯೆ, ಪ್ರಜ್ವಲ್ ರೇವಣ್ಣ ಚಲನ ವಲನಗಳ ಮೇಲೆ ಎಸ್‌ಐಟಿ ತಂಡ ನಿಗಾ ಇಟ್ಟಿದೆ. ಬೇರೆ ವಿಮಾನದಲ್ಲಿ ಟಿಕೆಟ್ ಬುಕ್ ಆಗುತ್ತದೆಯೇ, ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್ಐಟಿ ತಂಡ ಬೀಡುಬಿಟ್ಟಿದೆ.
ಇಂದು ಬರುವ ವಿಮಾನದ ಟಿಕೆಟ್ ರದ್ದು ಮಾಡಿ ಕಾದು ನೋಡುವ ತಂತ್ರವನ್ನು ಪ್ರಜ್ವಲ್ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಮಾನ ಟಿಕೆಟ್ಗೆ ನೀಡಿದ್ದ ಹಣವನ್ನು ಹಿಂಪಡೆಯದೆ ಅದನ್ನೇ ಮುಂದಿನ ಟಿಕೆಟ್ಗೆ ಮುಂಗಡವಾಗಿ ಇಟ್ಟಿದ್ದಾರೆ ಎನ್ನಲಾಗಿದೆ. 3.5 ಲಕ್ಷ ರೂ. ಮೊತ್ತದ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಅನ್ನು ಪ್ರಜ್ವಲ್ ಕಾಯ್ದಿರಿಸಿದ್ದರು.
ಈಗಾಗಲೇ 2 ಬಾರಿ ಪ್ರಜ್ವಲ್ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ, ಅಂದರೆ ಜೂನ್ 4ರ ನಂತರ ಪ್ರಜ್ವಲ್ ಭಾರತಕ್ಕೆ ಬರಬಹುದು ಎಂದು ಮಂಗಳವಾರ ವರದಿಯಾಗಿತ್ತು. ಮತ್ತೊಂದೆಡೆ, ವಾಪಸಾಗುವಂತೆ ಕುಟುಂಬಸ್ಥರಿಂದ ಪ್ರಜ್ವಲ್ಗೆ ಒತ್ತಡ ಹೆಚ್ಚಾಗಿದೆ ಎಂದೂ ಇತ್ತೀಚೆಗೆ ವರದಿಯಾಗಿತ್ತು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...