No menu items!
5.3 C
Munich
Wednesday, September 23, 2026

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲು.!

Must read

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನೂ ಘೋಷಣೆ ಮಾಡಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕರಾದ ಜಿಟಿ ದೇವಗೌಡರ ಸಮ್ಮುಖದಲ್ಲಿ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಬಿ ಫಾರಂ ನೀಡಿದ್ದಾರೆ. ಬಿಜೆಪಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ.
ಜೆಡಿಎಸ್‌ಗೆ ಈ ಕ್ಷೇತ್ರ ಬಿಟ್ಟುಕೊಡುವುದಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಸುಳಿವು ನೀಡಿದ್ದರು. ಮೇ 15ಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದಾಗಿಯೂ ಹೇಳಿದ್ದರು. ಅದರಂತೆಯೇ ಇಂದು ಅಭ್ಯರ್ಥಿಗೆ ಬಿ ಫಾರಂ ನೀಡಲಾಗಿದೆ. ಹೀಗಾಗಿ ಇದೀಗ, ಬಿಜೆಪಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.

- Advertisement -spot_img

More articles

- Advertisement -spot_img

Latest article