No menu items!
22.4 C
Munich
Wednesday, July 15, 2026

ಕೇಂದ್ರ ಸರ್ಕಾರ ನೀಡಿದ ಹಣವನ್ನು ರೈತರಿಗೆ ಸರಿಯಾಗಿ ತಲುಪಿಸಿಲ್ಲ: ಆರ್.ಅಶೋಕ್‌

Must read

ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ.
ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು‌. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -spot_img

More articles

- Advertisement -spot_img

Latest article