ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಸೇರಿದಂತೆ ಲವು ಗಣ್ಯರಿಂದ ಶುಭ ಹಾರೈಕೆ!

Date:

ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ.
ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ, “ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾವುದೇ ಆಚರಣೆ ಮಾಡದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ” ಎಂದು ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಶನಿವಾರ ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಎಚ್. ಡಿ. ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, “ಹಿರಿಯ ಮುತ್ಸದ್ದಿ ನಾಯಕರು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶುಭ ಕೋರಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ‘ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು. ವಯಸ್ಸು ಲೆಕ್ಕಿಸದ ಅವರ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ, ಗ್ರಾಮೀಣ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅವರು ಅತ್ಯಮೂಲ್ಯ ಮಾರ್ಗದರ್ಶನ ನೀಡುವಂತಾಗಲಿ ಎಂದು ಪ್ರಾರ್ಥಿಸುವೆ’ ಎಂದು ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...