ಹೆಚ್.ಡಿ. ರೇವಣ್ಣಗೆ ಬಿಗ್ ರಿಲೀಫ್ !

Date:

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶಾದ್ಯಂತ ಬಾರೀ ಸಂಚಲನ ಮೂಡಿಸ್ತಿದೆ, ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ACMM) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ.
ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.
ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ನೇಮಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಹೇಳಿಕೆ ಪಡೆಯಿತು. ಈ ವೇಳೆ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ ಸೆಕ್ಷನ್ ಅನ್ನು ಸಹ ಎಸ್ಐಟಿ ಸೇರಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದೆ.

Share post:

Subscribe

spot_imgspot_img

Popular

More like this
Related

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ ಬೆಂಗಳೂರು:...