ನನ್ನ ಪ್ರಕಾರ ಪ್ರಜ್ವಲ್ SIT ತನಿಖೆ ಎದುರಿಸುವುದು ಸೂಕ್ತ: ನಿಖಿಲ್ ಕುಮಾರಸ್ವಾಮಿ

Date:

ಬೆಂಗಳೂರು: ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದರು.
ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ.

ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ? ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್ ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...