ಸಿದ್ದರಾಮಯ್ಯನವರು ನಮ್ಮ ಸಮಾಜದ ಋಣ ತೀರಿಸುವ ಕೆಲಸ ಮಾಡಲಿ !

Date:

ಕಾರವಾರ: ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದೇ ಇದ್ದಲ್ಲಿ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುತ್ತೇವೆ. ಈ ಹೋರಾಟ ಮುಗಿಯುವುದರೊಳಗಾಗಿ ಸೂಕ್ತ ಪರಿಹಾರ ಕೊಡದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇನ್ನೂ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದೇ ಇದ್ದಲ್ಲಿ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುತ್ತೇವೆ. ಈ ಹೋರಾಟ ಮುಗಿಯುವುದರೊಳಗಾಗಿ ಸೂಕ್ತ ಪರಿಹಾರ ಕೊಡದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ ಜನಾಂಗದ ಶಾಸಕರು ಅಧಿವೇಶನದಲ್ಲಿ ಒತ್ತಾಯಿಸಬೇಕು. ಇಲ್ಲದಿದ್ದರೆ ನಮ್ಮ ಜನರು ಇಟ್ಟ ಭರವಸೆ ಕಳೆದುಕೊಳ್ಳುವ ಸಂದರ್ಭ ಬರಬಹುದು.
ಶಾಸಕರು ನಮ್ಮ ಜನಾಂಗದ ಋಣ ತೀರಿಸಲಿ. ಸಿಎಂ ಸಿದ್ದರಾಮಯ್ಯನವರು ಸ್ಪಂದಿಸುವ ಕೆಲಸವನ್ನಾದರೂ ಮಾಡಬೇಕಿತ್ತು. ನಮ್ಮ ಶಾಂತಿ, ಸಹನೆ ಪರೀಕ್ಷೆ ಮಾಡುವ ಕೆಲಸ ಮಾಡಿದರೆ ಅನಿವಾರ್ಯವಾಗಿ ಉಗ್ರ ಹೋರಾಟ ಮಾಡುವ ಸಂದರ್ಭ ಬರಲಿದೆ. ಸರ್ಕಾರ ಮಾತು ಕೊಟ್ಟು ವಿಳಂಬ ಮಾಡಿದೆ. ಸಿದ್ದರಾಮಯ್ಯನವರು ನಮ್ಮ ಸಮಾಜದ ಋಣ ತೀರಿಸುವ ಕೆಲಸ ಮಾಡಲಿ” ಎಂದರು.
ಕಳೆದ 2023ರಲ್ಲಿ ಸರಕಾರ ವಿಶೇಷವಾಗಿ 2ಡಿ ಮೀಸಲಾತಿ ನೀಡಿದ್ದರೂ, ಅನುಷ್ಠಾನವಾಗುವ ಸಮಯದಲ್ಲಿ ನೀತಿ ಸಂಹಿತೆ ಎದುರಾಗಿತ್ತು. ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಹೋರಾಟಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಉಳವಿಯಿಂದ ಮತ್ತೆ ಹೋರಾಟ ಪ್ರಾರಂಭಿಸುತ್ತೇವೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...