ಚಿಕ್ಕಮಗಳೂರು: ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದ ರಾಜ್ಯದ ಜನ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರು,ಮಕ್ಕಳು, ಪೋಷಕರು ಎಲ್ಲರೂ ಗೊಂದಲದಲ್ಲಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದ ರಾಜ್ಯದ ಜನ ಕಷ್ಟ ಅನುಭವಿಸುತ್ತಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ರು ಏನು ಮಾಡಲಿಲ್ಲ, ಪೊಲೀಸರ ಮೇಲೆ ಹಲ್ಲೆ ಮಾಡುತ್ತಾರೆ ಅಂದ್ರೆ ಸರ್ಕಾರ ಇದ್ಯಾ ಅಂತ ಜನ ಪ್ರಶ್ನೆ ಮಾಡ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಸರ್ಕಾರದ ಮೃದು ಧೋರಣೆಯೇ ಇದಕ್ಕೆಲ್ಲಾ ಕಾರಣ. ಗೃಹ ಸಚಿವರು ಬಿಜೆಪಿ ಕಾಲದ ಕೊಲೆ ಲೆಕ್ಕ ಹೇಳ್ತಿದ್ದಾರೆ ಎಂದು ಕಿಡಿಕಾರಿದರು.
ಜನ ನಿಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ನೀಡಿದ್ದಾರೆ. ಸಿಎಂ ರಾಜ್ಯದಲ್ಲಿ ಒಂದೇ ಒಂದು ಗುದ್ದಲಿ ಪೂಜೆ ಮಾಡಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶ ಬಂದಾಗ ಸರ್ಕಾರಕ್ಕೆ ಅರಿವಾಗುತ್ತದೆ. 20 ಸ್ಥಾನ ಗೆಲ್ತೀವಿ ಅಂತಾರೆ, ಮೋದಿ ಗ್ಯಾರಂಟಿ ಮುಂದೆ ಯಾವ ಗ್ಯಾರಂಟಿಯೂ ಇಲ್ಲ. ಜನ ನಮಗೆ ಆಶೀರ್ವಾದ ಮಾಡಿರುವ ನಂಬಿಕೆ ಇದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದ ರಾಜ್ಯದ ಜನ ಕಷ್ಟ ಅನುಭವಿಸುತ್ತಿದ್ದಾರೆ !
Date:






