ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸರ್ವ ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟೆಯಾಗಿ ಮಾತುಕತೆ ನಡೆಸಿದರು. ಮಾಜಿ ಸಚಿವ ಹೆಚ್.ಡಿ ರೇವಣ್ಣ ಟೆಂಪಲ್ ರನ್ ಮುಂದುವರಿದಿದ್ದು, ಭಾನುವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮತ್ತೆ ಟೆಂಪಲ್ ರನ್ ನಲ್ಲಿ ಹೆಚ್.ಡಿ ರೇವಣ್ಣ !
Date:






