ಬಿತ್ತನೆ ಬೀಜ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Date:

ಬೆಂಗಳೂರು: ಬಿತ್ತನೆ ಬೀಜ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತೀವ್ರ ಬರಗಾಲದಿಂದಾಗಿ ಬೀಜೋತ್ಪಾದನೆ ಕುಂಠಿತವಾಗಿದೆ. ಹೀಗಾಗಿ ಬಿತ್ತನೆ ಬೀಜ ದರ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ನೆರೆಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬಿತ್ತನೆ ಬೀಜದ ದರ ಕಡಿಮೆ ಇದೆ ಎಂದು ವಿಪಕ್ಷಗಳ ಟೀಕೆಗಳಿಗೆ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಬಿತ್ತನೆ ಬೀಜ ದರ ಏರಿಕೆಗೆ ಸಂಬಂಧಿಸಿದಂತೆ ವಿಪಕ್ಷ ಟೀಕೆಗೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ. ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣವಾಗಿದೆ. 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ. ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ ಎಂದು ಸಮರ್ಥನೆ ಮಾಡಿಕೊಂಡರು.
ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ. ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ ಎಂದು ತಿಳಿಸಿದ್ದಾರೆ

Share post:

Subscribe

spot_imgspot_img

Popular

More like this
Related

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...