ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಆದೇಶವನ್ನು ಕೋರ್ಟ್ ಮೇ 31ಕ್ಕೆ ಕಾಯ್ದಿರಿಸಿದೆ. ಇಂದು ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್, ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದಗಳನ್ನು ಆಲಿಸದ ನಂತರ ಭವಾನಿ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದು, ಮೇ 31ಕ್ಕೆ ಆದೇಶ ಮುಂದೂಡಿದ್ದಾರೆ.
SIT ಪರ ಎಸ್ಪಿಪಿ ಬಿ.ಎನ್.ಜಗದೀಶ್ ವಾದಮಂಡನೆ ಮಾಡಿದ್ದು, ಭವಾನಿ ಅವರು ಸತೀಶ್ ಬಾಬು ಮತ್ತಿತರರಿಗೆ ಮೊಬೈಲ್ ಕರೆಗಳನ್ನು ಮಾಡಿಸಿದ್ದಾರೆ. ಭವಾನಿಯನ್ನು ಬಂಧಿಸದೇ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಿಲ್ಲ. ಭವಾನಿ ಹಣಬಲ ಹೊಂದಿದ್ದು ರಾಜಕೀಯವಾಗಿ ಬಲಾಢ್ಯರಾಗಿದ್ದಾರೆ. ಹೀಗಾಗ ಅವರ ಬಂಧನ ಅನಿವಾರ್ಯವೆಂದು ಎಸ್ಐಟಿ ವಾದಿಸಿದೆ.
ಭವಾನಿ ರೇವಣ್ಣ ಎಸ್ಐಟಿ ನೀಡಿರುವ ಪತ್ರದ ವೈಖರಿ ಗಮನಿಸಬೇಕು. ಎಸ್ಐಟಿ ಯಾವಾಗ ನೋಟಿಸ್ ನೀಡಬೇಕೆಂದು ಭವಾನಿ ನಿರ್ಧರಿಸುವಂತಿಲ್ಲ. ಪ್ರಕರಣದಲ್ಲಿ ಸಾಕ್ಷಿಯಾಗಲು ಅವರು ಪ್ರಯತ್ನಿಸಿದಂತಿದೆ. ಸಂತ್ರಸ್ತೆ ಇಟ್ಟಿದ್ದ ಸ್ಥಳದಿಂದ ತಪ್ಪಿಸಿಕೊಂಡು ಸಹೋದರಿ ಮನೆಗೆ ತೆರಳಿದ್ದಾಳೆ. ಸಂತ್ರಸ್ತೆ ತನ್ನ ಪುತ್ರನ ವಿರುದ್ಧ ದೂರು ನೀಡದಂತೆ ತಡೆಯಲು ಭವಾನಿ ಯತ್ನಿಸಿದ್ದಾರೆ.
ಸಂತ್ರಸ್ತೆಯ ಸಿಆರ್ಪಿಸಿ 161, 164 ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಭವಾನಿ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯ ಸಂಗ್ರಹಸಲಾಗಿದೆ. ಶಾಸಕರ ಕುಟುಂಬದವರಾಗಿ ಕಾನೂನು ಪಾಲಿಸಬೇಕು ಆದರೆ, ಕಾನೂನು ಮೀರಿ ಭವಾನಿ ರೇವಣ್ಣ ವರ್ತಿಸಿದ್ದಾರೆ ಹೀಗಾಗಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು. ಸಮಾಜದ ಹಿತಾಸಕ್ತಿ ಪರಿಗಣಿಸಿ ಅರ್ಜಿ ವಜಾಗೊಳಿಸಬೇಕು ಎಂದು ವಾದಿಸಿದ್ದಾರೆ.
ಭವಾನಿ ರೇವಣ್ಣಗೆ ಸಿಗದ ಜಾಮೀನು: 31 ಕ್ಕೆ ಮುಂದೂಡಿದ ಕೋರ್ಟ್
Date:






