ವಿಶ್ವ ಆರ್ಥಿಕ ವೇದಿಕೆ ಸೂಚ್ಯಂಕ: ಮುಂದುವರೆದ ಭಾರತದ ಕುದುರೆ ಓಟ..

Date:

ವಿಶ್ವ ಆರ್ಥಿಕತೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವ ಭಾರತ, ವಿಶ್ವ ಆರ್ಥಿಕ ಸೂಚ್ಯಾಂಕದಲ್ಲಿ ಬರೋಬ್ಬರಿ 16 ಅಂಕಗಳ ಜಿಗಿತದೊಂದಿಗೆ 39ನೇ ಸ್ಥಾನವನ್ನು ಅಲಂಕರಿಸಿಕೊಂಡಿದೆ.
ರಾಷ್ಟ್ರದ ಆರ್ಥೀಕ ವ್ಯವಸ್ಥೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿರಂತರ ಪ್ರಗತಿ ಕಂಡಿರುವ ಭಾರತವೀಗ 138 ರಾಷ್ಟ್ರಗಳ ಪಟ್ಟಿಯಲ್ಲಿ 39ನೇ ಸ್ಥಾನಕ್ಕೇರುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದೆ. ಒಟ್ಟು 31 ಸ್ಥಾನಗಳ ಏರಿಕೆಯನ್ನು ಕಂಡಿರುವ ಭಾರತಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ. ಪಾಕ್ ಉಗ್ರರ ದಾಳಿಯ ನಡುವೆಯೂ ಭಾರತ ಆರ್ಥಿಕ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆ ಕಾಣುತ್ತಿರುವುದು ದೇಶ ವಿದೇಶಗಳಿಂದ ಮೆಚ್ಚುಗೆಗೆ ಪಾತ್ರವಾಗಿದೆ.
ಸಾರ್ವಜನಿಕ ಸೇವಾ ವಲಯಗಳಲ್ಲಿ ಭಾರತದ ತ್ವರಿತ ಗತಿಯ ಪ್ರಗತಿ, ವಿದೇಶಿ ಬಂಡವಾಳ ಹೂಡಿಕೆಗೆ ಹೆಚ್ಚು ಪ್ರೋತ್ಸಾಹ, ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆಯೇ ಭಾರತದ ಈ ಸಾಧನೆ ಕಾರಣ ಎಂದು ಬಣ್ಣಿಸಲಾಗಿದೆ. ಇದರ ಹೊರತಾಗಿಯೂ ಭಾರತ ಹಲವಾರು ವಲಯಗಳಲ್ಲಿ ಪ್ರಗತಿ ಕಾಣ ಬೇಕಿದೆ ಎನ್ನಲಾಗಿದೆ. ಪ್ರಮುಖವಾಗಿ ಕಾರ್ಮಿಕರ ಸಮಸ್ಯೆ, ಸಾರ್ವಜನಿಕ ಮಾರುಕಟ್ಟೆಯಲ್ಲಿ ದಕ್ಷತೆಯ ಸಮಸ್ಯೆ, ಮೂಲ ಸೌಕರ್ಯಗಳ ಸಮಸ್ಯೆ ಸೇರಿದಂತೆ ಇನ್ನೂ ಹಲವಾರು ಸಮಸ್ಯೆಗಳನ್ನು ಭಾರತ ಎದುರಿಸುತ್ತಿದೆ ಎಂದು ಆರ್ಥಿಕ ವೇಧಿಕೆ ಅಭಿಪ್ರಾಯ ಪಟ್ಟಿದೆ.
ಇನ್ನು ಆರ್ಥಿಕ ವೇಧಿಕೆಯಲ್ಲಿ ಪ್ರಬಲ ಪೈಪೋಟಿ ನೀಡುತ್ತಾ ಬಂದಿರುವ ರಷ್ಯಾ, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾ ದೇಶಗಳನ್ನು ಹಿಂದಿಕ್ಕಿದ್ದು, ಅದರಲ್ಲಿ ಚೀನಾ 28ನೇ ಸ್ಥಾನ ಗಳಿಸೋ ಮೂಲಕ ಭಾರತಕ್ಕಿಂತ ಮುಂದಿದೆ. ಉಳಿದಂತೆ ಶ್ರೀಲಂಕಾ, ಭೂತಾನ್, ನೇಪಾಳ ಹಾಗೂ ಬಾಂಗ್ಲಾದೇಶ ಭಾರತಕ್ಕಿಂತ ಹಿಂದಿದೆ.
ಪಾಕಿಸ್ತಾನ ಕುಸಿತ.
ಇನ್ನು ಆರ್ಥಿಕ ಹಾಗೂ ಸಾಮಾಜಿಕ ವಲಯಗಳಲ್ಲಿ ಸಾಕಷ್ಟು ಸಮಸ್ಯೆಗಳನ್ನು ಹೊಂದಿರುವ ನೆರೆಯ ರಾಷ್ಟ್ರ ಪಾಕಿಸ್ಥಾನ ಪಟ್ಟಿಯಲ್ಲಿ 122ನೇ ಸ್ಥಾನದಲ್ಲಿದೆ. ತಾನೇ ಪಳಗಿಸಿದ್ದ ಭಯೋತ್ಪಾದನಾ ಸಂಘಟನೆಗಳಿಂದ ತಮ್ಮ ರಾಷ್ಟ್ರಕ್ಕೆ ಮುಳುವಾಗಿ ಹೋಗಿರುವುದರಿಂದ ವಿಶ್ವದೆಲ್ಲಡೆ ಪಾಕ್ ಭಯೋತ್ಪಾದಕ ಪ್ರಚೋದಿತ ರಾಷ್ಟ್ರ ಎಂದು ಗುರುತಿಸಲ್ಪಟ್ಟಿದೆ. ಅಲ್ಲದೇ ಭ್ರಷ್ಟಾಚಾರ, ಅಸ್ಥಿರ ಆಡಳಿತ, ಕ್ರಿಮಿನಲ್ ಪ್ರಕರಣಗಳಿಂದ ಪಾಕ್‍ನ ಆರ್ಥಿಕ ವ್ಯವಸ್ಥೆ ತಲೆಕೆಳಗಾಗಿದೆ. ವಿಶ್ವ ಆರ್ಥಿಕ ಸೂಚ್ಯಾಂಕ ಪಟ್ಟಿಯಲ್ಲಿ ಸ್ವಿಟ್ಜೆರ್‍ಲ್ಯಾಂಡ್ ಅಗ್ರ ಸ್ಥಾನ ಪಡೆದಿದ್ದು, ಸಿಂಗಾಪುರ, ಅಮೇರಿಕಾ, ನೆದರ್ಲೆಂಡ್, ಹಾಗೂ ಜರ್ಮನಿ ನಂತರದ ಸ್ಥಾನದಲ್ಲಿದೆ.

Like us on Facebook  The New India Times

POPULAR  STORIES :

ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!

ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?

ಬಿಗ್ ಬಾಸ್ ಮನೆಯ ರಹಸ್ಯ ಲೀಕ್..!

ಜಿಯೋ ಕಾಲ್‍ಡ್ರಾಪ್ ಸಮಸ್ಯೆ: ಏರ್‍ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಪೆಪ್ಸಿ ಆ್ಯಡ್‍ನಲ್ಲಿ ವಿರಾಟ್‍ನ ದ್ವಂದ್ವ ನಿಲುವು..!

ಜಿಯೋ ಎಫೆಕ್ಟ್: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಉಚಿತ ಅನ್‍ಲಿಮಿಟೆಡ್ ವಾಯ್ಸ್ ಕಾಲ್..!

ಆನ್‍ಲೈನ್ ಶಾಪಿಂಗ್ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ನಿಮಗೆ ಗೊತ್ತಾ ವಾಟ್ಸಾಪ್‍ಗಿಂತ ‘ಅಲ್ಲೋ ಆಪ್’ ಸಖತ್ ಡಿಫರೆಂಟ್ ಆಗಿದೆ..!

Share post:

Subscribe

spot_imgspot_img

Popular

More like this
Related

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ದರ...

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?

ಮೂಸಂಬಿ ಜ್ಯೂಸ್​​ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ? ಮೂಸಂಬಿ ಹಣ್ಣು ಯಾವ...

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...