ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ.
ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.