ಮೈಸೂರು: ಜನ ಮತ್ತೊಮ್ಮೆ ಸಮಾಜಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ ಮತ್ತೊಮ್ಮೆ ಸಮಾಜಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇವೆ.
ದೇಶ ಮತ್ತು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೂ ಮುನ್ನ ಬಿಜೆಪಿಗೆ ಮುನ್ನಡೆ ಸಿಕ್ಕಿರುವುದು ಖುಷಿ ವಿಚಾರ ಎಂದು ಹೇಳಿದರು. ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ವಿಚಾರವಾಗಿ ಮಾತನಾಡಿ, ಸದ್ಯ ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ನನ್ನ ಮೊದಲ ಆದ್ಯತೆ ಜನಪರ ಕೆಲಸ ಎಂದು ತಿಳಿಸಿದರು.