No menu items!
15 C
Munich
Saturday, June 13, 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

Must read

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಪರಾರಿ ಆಗ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯನ್ನು ಮುಂಬಯಿ ಏರ್‌ಪೋರ್ಟ್‌ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್‌ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ಸೂಚನೆ ಪ್ರಕಾರ ಭಾರತಕ್ಕೆ ಮರಳಿದ್ದ. ಇತ್ತೀಚೆಗೆ ಬಂಧಿತನಾಗಿದ್ದ ಮುಸ್ತಫಾ ಪೈಚಾರ್ ಎಂಬ ಆರೋಪಿಗೆ ಸಕಲೇಶಪುರದಲ್ಲಿ ವಾಸ್ತವ್ಯ ಹೂಡಲು ಸಹಕರಿಸಿದ್ದ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article