ಬೆಂಗಳೂರು: ಮಾಧ್ಯಮಲೋಕದಲ್ಲಿ ಮಿಂಚಿದ, ರಾಮೋಜಿ ಫಿಲ್ಮ್ಸಿಟಿಯನ್ನು ವಿಶ್ವ ವಿಖ್ಯಾತಿಗೊಳಿಸಿದ ರಾಮೋಜಿ ರಾವ್ ವಿಧಿವಶರಾಗಿದ್ದರೆ. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ರಾವ್ ಅವರು ಶನಿವಾರ ಬೆಳಗಿನ ಜಾವ 4:50ಕ್ಕೆ ನಿಧನರಾದರು.
ತಮ್ಮ 87 ವರ್ಷಗಳ ಜೀವಿತಾವಧಿಯಲ್ಲಿ ವಿವಿಧ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ‘ಮಾಧ್ಯಮ ವ್ಯಾಪಾರವಲ್ಲ, ಸಮಾಜವನ್ನು ಜಾಗೃತಗೊಳಿಸುವ ವೇದಿಕೆ’ ಎಂದೇ ರಾಮೋಜಿ ರಾವ್ ನಂಬಿದ್ದರು. 1969 ರಲ್ಲಿ ಅನ್ನದಾತ ಎಂಬ ಮಾಸ ಪತ್ರಿಕೆ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಮೊದಲ ಹೆಜ್ಜೆಯಿಟ್ಟರು. ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದ ಇವರು ಕೃಷಿ ಲೋಕಕ್ಕೆ ನೀಡಿದ ಕೊಡುಗೆ ಅಪಾರ.
ಇನ್ನೂ ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿದೆ. ಅಲ್ಲಿ ಕುಟುಂಬ, ಸ್ನೇಹಿತರು, ಗಣ್ಯರು ಮತ್ತು ಹಿತೈಷಿಗಳು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.