ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳಾಗುತ್ತೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣ ಸರ್ಕಾರಕ್ಕೆ ಉರುಳಾಗೋದು ಖಚಿತ ಯಾಕಂದ್ರೆ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಕೇವಲ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟರೆ ಸಾಲದು, ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಹಗರಣ ನಡೆದಿದೆ. ಆದ್ದರಿಂದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು. ಸರ್ಕಾರದಲ್ಲಿ 40 ಪರ್ಸೆಂಟ್ ಅಲ್ಲ, 60 ಪರ್ಸೆಂಟ್ ಕಮೀಷನ್ ಆಗಿದೆ. ರಾಜೀನಾಮೆ ಕೊಡೋದು ಅಷ್ಟೆ ಅಲ್ಲ, ಇವರೆಲ್ಲ ಒಳಗೆ ಹೋಗ್ತಾರೆ ಎಂದು ಸರ್ಕಾರದ ವಿರುದ್ದ ಶಾಸಕ ಮಹೇಶ್ ಟೆಂಗಿನಕಾಯಿ ಕಿಡಿಕಾರಿದರು.L
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳು !
Date: