ನವದೆಹಲಿ: ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಕೆ ಮತ್ತೆ ದೇಶದಲ್ಲಿ ಆರಂಭವಾಗಿದೆ. ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಇನ್ನೂ ಈ ಕುರಿತು ದೆಹಲಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ಮಾಧ್ಯಮಗಳ ಜೊತೆ ಮಾತನಾಡಿದರು. ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ನರೇಂದ್ರ ಮೋದಿ ಸಂಪುಟದಲ್ಲಿ ಸೇರುವುದು ಖಚಿತವಾಗಿದೆ. ಕುಮಾರಸ್ವಾಮಿ ಅವರು ಇಂದು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಸೇರುವುದು ಖಚಿತವಾಗಿದೆ !
Date: