ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ಈ ಸಂಬಂಧ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಕೂಡ ಅರೆಸ್ಟ್ ಮಾಡಲಾಗಿದೆ. ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಪವಿತ್ರಾಗೌಡಳನ್ನು ವಶಕ್ಕೆ ಪಡೆದು ಕಾಮಾಕ್ಷಿ ಪಾಳ್ಯ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಬಂದಿದ್ದಾರೆ.
ಇನ್ನೂ ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್ ಹೋಟೆಲ್ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟ ದರ್ಶನ್ ಗೆಳತಿ ಪವಿತ್ರಾಗೌಡ ಅರೆಸ್ಟ್
Date: