ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳು ಬಳಸಿದ್ದ ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ವಿನಯ್ ಹೆಸರಿನಲ್ಲಿ ನೋಂದಣಿಯಾಗಿರುವ ಕೆಂಪು ಬಣ್ಣದ ಒಂದು ಜೀಪ್ ಹಾಗೂ ಪ್ರದೋಶ್ ಹೆಸರಿನಲ್ಲಿ ನೋಂದಣಿಯಾಗಿರುವ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ಜಪ್ತಿ ಮಾಡಲಾಗಿದೆ. ರೇಣುಕಾಸ್ವಾಮಿ ಹತ್ಯೆಯಾದ ಜೂನ್ 8ರ ರಾತ್ರಿ ಘಟನಾ ಸ್ಥಳಕ್ಕೆ ಬರಲು ನಟ ದರ್ಶನ್ ಬಳಸಿದ್ದ ಜೀಪ್ ಹಾಗೂ ಸ್ಕಾರ್ಪಿಯೋ ಕಾರನ್ನು ಜಪ್ತಿ ಮಾಡಲಾಗಿದ್ದು, ಕಾರಿನಲ್ಲಿ ಮದ್ಯದ ಬಾಟಲಿ ಸಹ ಪತ್ತೆಯಾಗಿದೆ ಎಂಬ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.
ರೇಣುಕಾಸ್ವಾಮಿ ಕೊಲೆಗೆ ಬಳಕೆ ಮಾಡಿದ್ದ ಕಾರುಗಳು ಜಪ್ತಿ!
Date: