No menu items!
4.8 C
Munich
Saturday, May 2, 2026

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ !

Must read

ಹುಬ್ಬಳ್ಳಿ: ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೇ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ.
ಅಧಿಕಾರದಲ್ಲಿ ಇರುವವರು ಆಗಿರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆತ್ತಿಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಸಂಚು ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ. ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.

- Advertisement -spot_img

More articles

- Advertisement -spot_img

Latest article