ಬೆಂಗಳೂರು: ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಮತ್ತು ಆರೋಗ್ಯಕ್ಕೆ ಮಾರಕವಾಗಿರುವ ಇನ್ನೊಂದು ಕಾಯಿಲೆ ಎಂದರೆ ಡೆಂಗ್ಯೂ ಜ್ವರ. ಸೊಳ್ಳೆಗಳಿಂದ ಹರಡುವ ಈ ಕಾಯಿಲೆಯಿಂದಾಗಿ ಸಾವು ಕೂಡ ಸಂಭವಿಸಬಹುದು.
ಇದರ ನಡುವೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಸಾವಿರದ ಗಡಿಯತ್ತ ದಾಖಲಾಗಿವೆ. ಒಂದು ತಿಂಗಳಿನಲ್ಲಿ ನೂರಾರು ಕೇಸ್ ದಾಖಲಾಗಿವೆ. ಪ್ರತಿನಿತ್ಯ 50-60 ಪ್ರಕರಣಗಳು ದಾಖಲಾಗುತ್ತಿವೆ. ಈ ಮಧ್ಯೆ ಮಳೆಯಿಂದಲೂ ಡೆಂಗ್ಯೂ ಕೇಸ್‍ಗಳು ಹೆಚ್ಚಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗರಾಜ್ ಎಂಬವರು ಗುರುವಾರ ಮೃತಪಟ್ಟಿದ್ದರು. ಇದೂ ಸಹ ಡೆಂಗ್ಯೂವಿನಿಂದಲೇ ಎಂಬ ಅನುಮಾನ ವ್ಯಕ್ತವಾಗಿದೆ.
ರಾಜ್ಯದಲ್ಲಿ ಪ್ರಸಕ್ತ ವರ್ಷ 4,414 ಡೆಂಗ್ಯೂ, 778 ಚಿಕುನ್ಗುನ್ಯಾ ಪ್ರಕರಣಗಳು ಪತ್ತೆ ಆಗಿವೆ. ಈ ನಡುವೆ ಕಳೆದ 10 ದಿನಗಳಲ್ಲಿ ಬರೋಬ್ಬರಿ 1,026 ಡೆಂಗ್ಯೂ, 137 ಚಿಕೂನ್ ಗುನ್ಯಾ ಪಾಸಿಟಿವ್ ಬಂದಿದ್ದು ಆತಂಕ ಮೂಡಿಸಿದೆ. ಚಿಕೂನ್ಗುನ್ಯಾಕ್ಕಿಂತ ಡೆಂಗ್ಯೂ ಹಾವಳಿಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಧಾರವಾಡದಲ್ಲಿ ಬಾಲಕಿ ಸಾವು
Date: