ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ 81 ವರ್ಷದ ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೇ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ.
ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೋಶಿ ಖಂಡಿಸಿದ್ದಾರೆ.
ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಕಿಡಿಕಾರಿದ್ದಾರೆ.
BSY ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ !
Date: