ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೆ ಒಂಬತ್ತು ದಿನಗಳ ಕಾಲ ವಶಕ್ಕೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು, ಈ ಹಂತದಲ್ಲಿ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿರುವ ಪ್ರಸನ್ನ ಕುಮಾರ್ ಅವರು ಪೊಲೀಸರ ಪರ ವಾದ ಮಂಡಿಸಿದರು.
ಈ ವೇಳೆ ರೇಣುಕಾ ಸ್ವಾಮಿಯನ್ನು ಕೊಲ್ಲುವ ಮುಂಚೆ ಆತನಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದಲ್ಲಿ ದರ್ಶನ್ ಹಾಗೂ ಗ್ಯಾಂಗ್ನ ಕ್ರೂರತೆಯ ಬಗ್ಗೆ ಸಣ್ಣ ಸುಳಿವೊಂದನ್ನು ನೀಡಿದ ಹಿರಿಯ ವಕೀಲ ಪ್ರಸನ್ನ ಕುಮಾರ್ ಅವರು ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಯಸಿದ್ದ ಮೆಗ್ಗರ್ ಯಂತ್ರವನ್ನು ಸಹ ವಶಪಡಿಸಿಕೊಳ್ಳಬೇಕಿದೆ ಎಂದು ಮಾಹಿತಿ ನೀಡಿದ್ದರು.
ರೇಣುಕಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಕೊಂದ ಡಿ ಗ್ಯಾಂಗ್
Date: