ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ ಭಾಗ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ ಭಾಗ್ಯ ನೀಡಿದೆ. ದೌರ್ಜನ್ಯ ಮಾಡ್ತಿದ್ದಾರೆ. ಹಾಲು, ಹಾಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರ ದರೋಡೆಗೆ ಮುಂದಾಗಿದೆ.
ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ರು. ಆಗ ಸಿದ್ದರಾಮಯ್ಯ ಅವರು, ಎಲ್ಲದರ ದರ ಹೆಚ್ಚಾಗುತ್ತೆ, ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ ಅಂತ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ?. ನಮ್ಮ ಸರ್ಕಾರ ಇದ್ದಾಗ ದರ ಕಡಿಮೆ ಮಾಡಿ ಅಂದ್ರು. ಇವರು ಮಾತ್ರ ದರ ಹೆಚ್ಚಳ ಮಾಡಿದ್ರು ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ ಭಾಗ್ಯ ನೀಡಿದೆ: ಆರ್.ಅಶೋಕ್
Date: