ಬೆಂಗಳೂರು: ಕಾಂಗ್ರೆಸ್ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ತಾರೆ ಅಂದುಕೊಂಡಿದ್ವಿ. ಆದ್ರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ತಾರೆ ಅಂದುಕೊಂಡಿದ್ವಿ.
ಆದ್ರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ. ಚೊಂಬು ಆದರೂ ಯಾವುದಕ್ಕಾದರೂ ಉಪಯೋಗಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್ ನಾಯಕರು ಕೊಡುವುದು ಹಳೆಯ ಚಿಪ್ಪು. ಚಿಪ್ಪು ಕೂಡ ಮೂರು ತೂತು, ಇವರ ಸರ್ಕಾರವೂ ತೂತು. ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್ ಗಾಂಧಿಗೆ ಹೋಗುತ್ತಿದೆ. ಬೆಲೆ ಇಳಿಸಬೇಕು ಇಲ್ಲಾ ಅವರೇ ಇಳಿಯಬೇಕು. ಇಳಿಯದಿದ್ದರೆ ಹೇಗೆ ಇಳಿಸಬೇಕು ಅಂತಾ ನಮಗೆ ಗೊತ್ತಿದೆ. ನುಂಗಣ್ಣ, ನುಂಗಣ್ಣ ಅಂತಾ ನುಂಗುವ ಕೆಲಸ ಒಂದೇ ಮಾಡ್ತಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ !
Date: