No menu items!
13.9 C
Munich
Thursday, May 7, 2026

ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ

Must read

ಬೆಂಗಳೂರಿನ ಹೊರವಲಯದಲ್ಲಿರುವ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಡೆದಿದ್ದ ಘಟನೆ ನಡೆದಿದೆ. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು.

ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃತಪಟ್ಟಿದ್ದನು. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಶ್ರೀಧರ್, ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಅನಾಥವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 2 ಎಕರೆ 36ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಎಂದು ಡೆತ್ ಬರೆದಿಟ್ಟು ಸ್ಯೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲಿ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ದಾಖಲು ಮಾಡಿಕೊಂಡಿದ್ದಾರೆ

- Advertisement -spot_img

More articles

- Advertisement -spot_img

Latest article