ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್‌ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೇವಿಡ್ ಜಾನ್ಸನ್ (52) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಕ್ರಿಕೆಟಿಗನಾಗಿದ್ದು, ಎಸ್‌ಎಲ್‌ವಿ ಪ್ಯಾರಡೈಸ್ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲವಾದರೂ ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಾಲ್ಕನೇ ಫ್ಲೋರ್ ನಿಂದ ಬಿದ್ದು ಮಾಜಿ ಕ್ರಿಕೆಟಿಗ ಆತ್ಮಹತ್ಯೆ!
Date: