ಬೆಂಗಳೂರು: ನಟ ಯುವ ರಾಜ್ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ ಎಂಬ ಮಾತುಗಳು ಆಡಿಯೋನಲ್ಲಿವೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.
‘ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’ ಎಂಬ ಮಾತುಗಳು ಆಡಿಯೋನಲ್ಲಿದೆ.
ಯುವ’ ಸಿನಿಮಾದ ಸೆಟ್ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಈ ಕಾರಣಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸಪ್ತಮಿ ಹಾಗೂ ಯುವ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು ಎಂಬ ಸುದ್ದಿಯೂ ಹರಿದಾಡುತ್ತಿದೆ.
ನಾನಾಗಿಯೇ ಯುವರಾಜ್ ಕುಮಾರ್ ಬಳಿ ಹೋಗಿಲ್ಲ: ನಟಿ ಸಪ್ತಮಿಗೌಡ ಆಡಿಯೋ ವೈರಲ್
Date: