17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

Date:

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ ಐವಾನ್ ಡಿ’ ಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ: ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ (ಡಿ.ಟಿ.ಎಸ್.) ಅವರುಗಳು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Share post:

Subscribe

spot_imgspot_img

Popular

More like this
Related

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...